ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲೇ ಸಾಗರ ತಾಲ್ಲೂಕು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ಸಾಧನೆಗೆ ಕಾರಣವಾದಂತ ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಅಭಿನಂದಿಸಲಾಯಿತು.
ಇಂದು ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಣ್ಣಪ್ಪ, ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ.ಕೆ ಅವರು ಬಿಇಓ ಪರಶುರಾಮಪ್ಪ.ಇ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಉತ್ತಮ ಸಾಧನೆಗೆ ನಿಮ್ಮ ಮಾರ್ಗದರ್ಶನ, ಸಲಹೆ-ಸೂಚನೆಗಳು, ಪಾಠ-ಪ್ರವಚನ ಕಾರಣವಾಗಿದೆ. ಈ ಕಾರಣದಿಂದಲೇ ಶಿವಮೊಗ್ಗ ಜಿಲ್ಲೆಯಲ್ಲೇ ಸಾಗರ ತಾಲ್ಲೂಕು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ ಎಂಬುದಾಗಿ ಕೊಂಡಾಡಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ನಿರ್ದೇಶಕರಾದಂತ ಪ್ರಕಾಶ್, ನಾಗರಾಜ್, ಮಂಜುನಾಥ್, ದೇವೇಂದ್ರಪ್ಪ, ಅನಸೂಯ ತಳವಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ವಸಂತ ಬಿ ಈಶ್ವರಗೆರೆ
BREAKING: ಪಾಕಿಸ್ತಾನದಿಂದ ಭಾರತಕ್ಕೆ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ಆಮದು ನಿಷೇಧಿಸಿದ ಕೇಂದ್ರ ಸರ್ಕಾರ
ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ