ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತಹಶೀಲ್ದಾರ್ ಆಗಿದ್ದಂತ ಚಂದ್ರಶೇಖರ ನಾಯಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ನೂತನ ತಹಶೀಲ್ದಾರ್ ಆಗಿ ಹೊಸನಗರ ತಹಶೀಲ್ದಾರ್ ರಶ್ಮಿ.ಹೆಚ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್.ಜೆ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ.
ಇನ್ನೂ ಚಿದ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಆಗಿದ್ದಂತ ಸಿದ್ದೇಶ್.ಎಂ ಅವರನ್ನು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಸಿ.ರಾಜೇಶ ಕುಮಾರ್ ಅವರನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದಂತ ಕೆ.ಎಲ್ ನರೇಂದ್ರ ಬಾಬು ಅವರನ್ನು ಚಿಕ್ಕಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಆಗಿ, ಕೆ.ಅಶ್ವಥನಾರಾಯಣ ಅವರನ್ನು ಮಾಲೂರು ತಾಲ್ಲೂಕು ತಹಶೀಲ್ದಾರ್ ಆಗಿ, ಪಿ.ಪರಶುರಾಮ್ ಅವರನ್ನು ರಾಯಚೂರು ತಾಲ್ಲೂತು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.
ಡಿ.ಪಾಂಡುರಂಗ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಗ್ರೇಡ್-2 ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಅಶ್ವಿನಿ.ಎಸ್ ಅವರನ್ನು ಹಾಸನ ಜಿಲ್ಲೆಯ ಆಲೂರು ತಾಲ್ಲೂಕು ಗ್ರೇಡ್-2 ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
BREAKING: ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಕೇಸ್: ಐವರು ಆರೋಪಿಗಳು ಅರೆಸ್ಟ್