ಶಿವಮೊಗ್ಗ: ಇಂದು ಸರ್ಕಾರಿ ನೌಕರರ ದಿನಾಚರಣೆ. ಈ ಸುಸಂದರ್ಭದಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರಿಗೆ ಸರ್ಕಾರಿ ನೌಕರರ ದಿನಾಚರಣೆಯ ಶುಭಾಷಯವನ್ನು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು /ಪದಾಧಿಕಾರಿಗಳಿಂದ ಸಾಗರ ತಾಲೂಕಿನ ಸಮಸ್ತ ಎಲ್ಲಾ ಇಲಾಖೆ ನೌಕರರ ಭಾಂದವರಿಗೆ ಸರ್ಕಾರಿ ನೌಕರರ ದಿನಾಚಾರಣೆ ಶುಭಾಶಯಗಳು ಅಂತ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ಚಿಕಿತ್ಸೆಯನ್ನು ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ನೋಂದಣಿಗೆ” ಚಾಲನೆ ನೀಡಿದ್ದಾರೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ಸೇರಿದಂತೆ ಸುಮಾರು 22 ಲಕ್ಷ ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಸುಮಾರು 2000 ಚಿಕಿತ್ಸಾ ವಿಧಾನಗಳಿಗೆ ಸರ್ಕಾರಿ ನೌಕರಿಗೆ ಈ ಉಚಿತ ಸೌಲಭ್ಯ ಸಿಗಲಿದೆ. ಎಲ್ಲಾ ರೀತಿಯ ರೋಗಗಳಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
ಸರ್ಕಾರಿ ನೌಕರರ ದಿನಾಚರಣೆಯಂದು ಉಚಿತ ಚಿಕಿತ್ಸಾ ಯೋಜನೆ ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರು, ಶಾಸಕರು ಹಾಗೂ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದಗಳನ್ನು ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸಂಜೀವಿನಿ ಯೋಜನೆಗೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಆನ್‌ಲೈನ್ ತರಬೇತಿ ಪೋರ್ಟಲ್’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ
ರಾಜ್ಯದ ಗಿಗ್ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್