ಶಿವಮೊಗ್ಗ : ಜಿಲ್ಲೆಯ ಸಾಗರದ ಸರ್ಕಾರಿ ಬಸ್ ನಿಲ್ದಾಣವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುತ್ತಿದ್ದು, ಡೆಲ್ಟಾ ಯೋಜನೆಯಡಿ 1 ಕೋಟಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನ 2 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಸದ್ಯದಲ್ಲಿಯೆ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿವಿಧ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿಯೆ ಹಿಂದೆ ಲೋಕಾರ್ಪಣೆ ಮಾಡಲಾಗಿತ್ತು. ಅಂದಿನಿಂದ ಹೊಸ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಇದೀಗ ಪ್ರಯಾಣಿಕರ ನಿರೀಕ್ಷಣಾ ಕೊಠಡಿಗಳಿಗೆ ಮೇಲ್ಚಾವಣಿ, ಮುಖ್ಯ ಕಟ್ಟಡ ಹಾಗೂ ನೆಲಕ್ಕೆ ಗ್ರಾನೈಟ್, 8 ಬಸ್ ನಿಲ್ಲಿಸುವುದಕ್ಕೆ ಹೊಸದಾಗಿ 3 ಬಸ್ ನಿಲ್ಲಿಸಲು ಜಾಗ ವಿಸ್ತರಿಸುವುದು, ಸುಸಜ್ಜಿತ ಶೌಚಾಲಯ, ಶುದ್ದ ಕುಡಿಯುವ ನೀರಿನ ಘಟಕ, ಪಾರ್ಕಿಂಗ್ ವ್ಯವಸ್ಥೆ ವಿಸ್ತರಣೆ, ಉಪಹಾರ ಗೃಹ ನವೀಕರಣ, ಮಹಿಳೆಯರಿಗೆ ವಿಶ್ರಾಂತಿ ಗೃಹ, ರಾತ್ರಿ ಪಾಳಿಯಲ್ಲಿ ತಂಗುವ ನೌಕರರಿಗೆ 10 ಹಾಸಿಗೆ ಸಾಮರ್ಥ್ಯದ ವಿಶ್ರಾಂತಿ ಗೃಹ, ಮುಖ್ಯದ್ವಾರಕ್ಕೆ ಹೊಂದಿಕೊಂಡಂತೆ ಚತುಷ್ಪಥ ರಸ್ತೆ ನಿರ್ಮಿಸಿ ಮಧ್ಯ ಡಿವೈಡರ್, ವಿದ್ಯುದ್ದೀಪ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಸಾಗರ ಪ್ರವಾಸಿಗರನ್ನು ಆಕರ್ಷಿಸುವಂತ ತಾಣವಾಗಿದೆ. ಸಾಗರಕ್ಕೆ ಬೇರೆಬೇರೆ ಭಾಗದಿಂದ ಪ್ರವಾಸಿಗರು ಬರುತ್ತಾರೆ. ಬರುವ ಪ್ರವಾಸಿಗರಿಗೆ ನಮ್ಮ ಬಸ್ ನಿಲ್ದಾಣ ಸುಂದರವಾಗಿ ಕಾಣಬೇಕು. ಬಸ್ ನಿಲ್ದಾಣದ ಒಂದು ಭಾಗದಲ್ಲಿ ಡ್ರೈನೇಜ್ ನಿರ್ಮಾಣ ಮಾಡಲಾಗುತ್ತಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಅಭಿವೃದ್ದಿ ನಂತರ ರೈಲ್ವೆ ಸ್ಟೇಷನ್ ಮುಂಭಾಗದ ರಸ್ತೆಯನ್ನು ಅಭಿವೃದ್ದಿಪಡಿಸಲಾಗುತ್ತದೆ. ಸಾಗರದ ಹಳೆ ಬಸ್ ನಿಲ್ದಾಣದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಫುಡ್‌ಕೋರ್ಟ್ ಮಾಡಲು ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಗರ ಕೆ ಎಸ್ ಆರ್ ಟಿಸಿ ಡಿಪೋ ಮ್ಯಾನೇಜರ್ ಬೀರಾದಾರ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ನಗರಸಭೆ ಸದಸ್ಯದೆ ಮಧುಮಾಲತಿ, ಸುರೇಶಬಾಬು, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಡಿ. ದಿನೇಶ್, ಮೋಹನ್, ವಿ.ಶಂಕರ್, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಟಿ.ಪಿ, ಶಾಸಕರ ಆಪ್ತ ಸಹಾಯಕ ಶ್ರೀನಿವಾಸಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.
BREAKING: ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆ ಥಳಿಸಿದ್ದ ಅಂಗಡಿ ಮಾಲೀಕ ಉಮೇದ್ ರಾಮ್ ಅರೆಸ್ಟ್
ಸಾಗರ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷರಾಗಿ ಶ್ಯಾಮಲಾ, ಉಪಾಧ್ಯಕ್ಷರಾಗಿ ಲತಾ ಆಯ್ಕೆ
ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ







