ಸುಭಾಷಿತ :

Wednesday, April 1 , 2020 1:00 AM

`ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ’ ಬೆಂಗಾಲ್ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು


Friday, February 22nd, 2019 4:34 pm

ಸ್ಪೋರ್ಟ್ಸ್ ಡೆಸ್ಕ್ : ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ ಸತತ ಎರಡನೇ ಗೆಲುವು ದಾಖಲಿಸಿದೆ.

ಒರಿಸ್ಸಾದ ಕಟಕ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ ತಂಡ ಕರ್ನಾಟಕದ ಬೌಲಿಂಗ್ ದಾಳಿಗೆ ತತ್ತರಿಸಿ 19.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು. ತಂಡದ ಪರ ಗೋಸ್ವಾಮಿ 40 ರನ್ ಹಾಗೂ ತಿವಾರ 36 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಕರ್ನಾಟಕದ ಪರ ಆಭಿಮನ್ಯು ಮಿಥುನ್ 3 ವಿಕೆಟ್ ಪಡೆದರೆ, ವಿನಯ್ ಕುಮಾರ್ ಮತ್ತು ಮನೋಜ್ ಬಂಗಾಡೆ ತಲಾ 2 ವಿಕೆಟ್ ಪಡೆದು ಮಿಂಚಿದರು. ಗುರಿ ಬೆನ್ನತ್ತಿದ ಕರ್ನಾಟಕ ತಂಡ 15.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು. ಕರ್ನಾಟಕದ ಪರ ಶರತ್ 50 ರನ್ ಹಾಗೂ ರೋಹನ್ ಕದಮ್ ಅಜೇಯ 81 ರನ್ ಗಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions