ಸುಭಾಷಿತ :

Monday, February 17 , 2020 5:09 AM

ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿ : ಸಿಂಧೂ, ಸೈನಾ ಶುಭಾರಂಭ


Thursday, January 9th, 2020 10:01 am

ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಹೆಮ್ಮೆಯ ಪಿ.ವಿ ಸಿಂಧೂ ಮತ್ತು ಸೈನಾ ನೆಹ್ವಾಲ್‌ ಶುಭಾರಂಭ ಮಾಡಿದ್ದಾರೆ. ಆದರೆ, ವಿಶ್ವದ ಮಾಜಿ ಅಗ್ರ ಶ್ರೇಯಾಂಕ ಆಟಗಾರ ಕಿಡಂಬಿ ಶ್ರೀಕಾಂತ್‌, ಬಿ. ಸಾಯಿ ಪ್ರಣೀತ್‌ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದಾರೆ.

ಬುಧವಾರ ಇಲ್ಲಿನ ಆ್ಯಕ್ಸಿಯೆಟಾ ಅರೆನಾದಲ್ಲಿ ನಡೆದ ಮಹಿಳೆಯರ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಸಿಂಧೂ ರಷ್ಯಾದ ಎವ್ಗೆನಿಯಾ ಕೊಸೆಟ್ಸ್ಕಾಯ ವಿರುದ್ಧ 21-15, 21-13 ನೇರ ಗೇಮ್‌ಗಳಿಂದ ಜಯ ಗಳಿಸಿ 2ನೇ ಸುತ್ತು ಪ್ರವೇಶಿಧಿಸಿದರು.

ಮತ್ತೊಂದು ಪಂದ್ಯದಲ್ಲಿ ಲಂಡನ್‌ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಬೆಲ್ಜಿಯಮ್‌ನ ಲಿಯಾನ್‌ ಟ್ಯಾನ್‌ ವಿರುದಟಛಿ ಜಯದ ಗಳಿಸಿ ಎರಡನೇ ಸುತ್ತು ಪ್ರವೇಶಿಸಿದರು.

ಇನ್ನು ಪುರುಷರ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಭಾರತದ ಎಚ್‌.ಎಸ್‌ ಪ್ರಣಯ್‌ ವಿಶ್ವದ 10ನೇ ಶ್ರೇಯಾಂಕದ ಕಂಟ ಸುನೆಯಾಮ ಅವರನ್ನು ಮಣಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions