ಮಂಡ್ಯ: ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯ ಜಿಲ್ಲೆಯನ್ನು ಭೇದಿಸಲು ಬಿಜೆಪಿ ರಣತಂತ್ರವೊಂದನ್ನು ಹೆಣೆಯುತ್ತಿದೆ. ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತರನ್ನು ತಮ್ಮತ್ತ ಸೆಳೆದು ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿಸಲು ಸಜ್ಜಾಗಿದೆ.
ತಾರಕ್ಕೇರಿದ ಗಡಿ ವಿವಾದ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಕೆಟ್ಟೆಚ್ಚರಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ
ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಜಿಲ್ಲೆ ಅಕ್ಷರಶಃ ರಣರಂಗವಾಗಿ ಬದಲಾಗಿತ್ತು. ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ನ ಕೆಲ ನಾಯಕರು ಹಿಂಭಾಗಿಲಿನಿಂದ ಸಪೋರ್ಟ್ ಮಾಡಿದ್ರು ಸಹ, ರೆಬಲ್ ಸ್ಟಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇಂಡುವಾಳು ಸಚ್ಚಿದಾನಂದ ಅವರ ಸಪೋರ್ಟ್ ಸುಮಲತಾ ಅವರಿಗೆ ನೂರು ಆನೆಯ ಬಲ ನೀಡಿತ್ತು. ಆ ವೇಳೆ ಸಚ್ಚಿದಾನಂದ ಅವರು ಕಾಂಗ್ರೆಸ್ ಪಕ್ಷದಲ್ಲಿ ಇದ್ರು, ಅಂದು ಮೈತ್ರಿ ಸರ್ಕಾರದ ಒಪ್ಪಂದದ ಪ್ರಕಾರ ಮಂಡ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲ ನೀಡಬೇಕಾಗಿತ್ತು. ಆದ್ರೆ ಕೆಲ ಕಾಂಗ್ರೆಸ್ ನಾಯಕರು ಹಿಂಬಾಗಿಲಿನಿಂದ ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ರು.