ಬೆಂಗಳೂರು: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಮಣ್ಣು ಕುಸಿದಿತ್ತು. ಇಂದು ಈ ಮಣ್ಣುನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು, ನಾಳೆಯಿಂದ ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭಿಸಲಾಗುತ್ತದೆ.
ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಹಳಿಯಲ್ಲಿನ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿ ಎಲ್ಲಾ ರೈಲು ಕಾರ್ಯಾಚರಣೆಗಳಿಗೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದಿದೆ.
ನಾಳೆಯಿಂದ ಈ ಮಾರ್ಗದಲ್ಲಿ ಈ ರೈಲುಗಳ ಸಂಚಾರ ಪುನರಾರಂಭ
* ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್
* ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಎಕ್ಸ್ಪ್ರೆಸ್
* ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
PSI ಹಗರಣ ತನಿಖೆ ಮಾಡಿದ್ರೆ ಬಿವೈ ವಿಜಯೇಂದ್ರ ಜೈಲಿಗೆ ಹೋಗೋದು ಖಚಿತ: MLA ಬೇಳೂರು ಗೋಪಾಲಕೃಷ್ಣ ಭವಿಷ್ಯ
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!
SHOCKING : ಬೆಂಗಳೂರಲ್ಲಿ ಸುದ್ದಿಗೋಷ್ಠಿಯ ವೇಳೆ ‘ಹೃದಯಾಘಾತದಿಂದ’ ಕಾಂಗ್ರೆಸ್ ಕಾರ್ಯಕರ್ತ ಸಾವು!