ಬಾಗಲಕೋಟೆ: ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು,ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ..
ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ್ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟೆ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ದಿನದ ಹಿಂದೆ ರೈತರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾರ್ಖಾನೆ ಕಚೇರಿ ಕಿಡಕಿ ಗಾಜು ಧ್ವಂಸಗೊಳಿಸಿದ್ದರು. ಬಾಗಕೋಟೆಯಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ.
BIG BREAKING NEWS: ಸ್ಯಾಂಡಲ್ ವುಡ್ ನಟಿ ತಾರಾ ಕಾರು ಚಾಲಕನ ವಿರುದ್ಧ FIR ದಾಖಲು | Actress Tara