ಗದಗ : ಪ್ರತಾಪ್ ಸಿಂಹ ಸಂಸದನಾಗುವುದಕ್ಕೆ ನಾಲಾಯಕ್, ಅವರು ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಸ್ ಶೆಲ್ಟರ್ ಮೇಲಿನ ಗುಂಬಜ್ ತೆರವು ವಿಚಾರದ ಕುರಿತು ಮಾತನಾಡಿದ್ದಾರೆ,
ಪ್ರತಾಪ್ ಸಿಂಹ ಸಂಸದನಾಗುವುದಕ್ಕೆ ನಾಲಾಯಕ್, ಅವರು ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ , ಇಂತಹ ಹೇಳಿಕೆಗಳ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಿದ್ದಾರೆ? ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಭ್ರಷ್ಟಾಚಾರದಲ್ಲಿ ಉದಯವಾಗಿ, ಅದರಲ್ಲಿ ಮುಳುಗಿದೆ. ಅದನ್ನು ಸರಿಪಡಿಸಿಕೊಳ್ಳಲು ಹೇಳುವ ಹಾಗೂ ಆ ಬಗ್ಗೆ ಧ್ವನಿ ಎತ್ತುವ ಧೈರ್ಯ ಈ ಸಂಸದರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ಮೈಸೂರು, ಬೆಂಗಳೂರಿನಲ್ಲಿ, ದೆಹಲಿಯಲ್ಲಿ ಗುಂಬಜ್ ರೀತಿಯಲ್ಲಿ ಸರ್ಕಾರಿ ಕಟ್ಟಡಗಳಿವೆ. ಅವುಗಳನ್ನು ಒಡೆಯುವ ಧೈರ್ಯ ನಿಮಗೆ ಉಂಟಾ ? ಒಬ್ಬ ಸಂಸದನಾಗಿ ಇಂತಹ ಅವಹೇಳನಕಾರಿ ಕೆಲಸ ಮಾಡಬಾರದು ಎಂದು ಕಿಡಿಕಾರಿದ್ದಾರೆ.
ಭಾರತ ಸ್ವಾವಲಂಬಿಯಾಗಲುಮಹಿಳೆಯರ ಭಾಗವಹಿಸುವಿಕೆ ಅತ್ಯಗತ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು
‘ICC T20 Ranking’ನಲ್ಲಿ ಭಾರತಕ್ಕೆ ಅಗ್ರ ಸ್ಥಾನ, ಪ್ರಜ್ವಲಿಸಿದ ‘ಸೂರ್ಯ’ಕುಮಾರ್.!
ಬೆಂಗಳೂರು ಟೆಕ್ ಸಮ್ಮಿಟ್: ಆವಿಷ್ಕಾರದ ಜೊತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಲು ಉದ್ಯಮಿಗಳಿಗೆ ಸಿಎಂ ಕರೆ