BIG BREAKING NEWS: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಇನ್ನಿಲ್ಲ

ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.