ಬೆಂಗಳೂರು: 2023-24ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳ 5, 8 ಮತ್ತು 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗತ್ತಿದೆ. ಇದಕ್ಕಾಗಿ ಮಾದರಿ ಪ್ರಶ್ನೋತ್ತರಗಳನ್ನು ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಕಾರ್ಯ ನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದು 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 ( SA-2)ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೋತ್ತರ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ 5, 8 ಮತ್ತು 9ನೇ ತರಗತಿಯ ಮಾದರಿ ಪ್ರಶ್ನೋತ್ತರ ಪತ್ರಿಕೆಗಳನ್ನು ದಿನಾಂಕ 26-01-2024ರಂದು ಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಮಾದರಿ ಪ್ರಶ್ನೋತ್ತರಗಳನ್ನು ವಿದ್ಯಾರ್ಥಿಗಳು ನೋಡಿ ವ್ಯಾಸಂಗ ಮಾಡುವಂತೆ ಸೂಚಿಸಿದೆ.