ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಗೆ ನಟ ಜಗ್ಗೇಶ್ ಟಾಂಗ್ ಕೊಟ್ಟಿದ್ದು, ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಜಗ್ಗೇಶ್, ಸರ್ವಆತ್ಮಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ. ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ, ಅವನ ಪಾಪಕರ್ಮ ಅವನ ಸುಡುತ್ತದೆ!
ಕಲಿಯುಗದಲ್ಲಿ ದೇವರು ಕಲ್ಲಲ್ಲಾ, ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ ಎಂದು ಟ್ವೀಟ್ ಮಾಡಿದ್ದಾರೆ.
ಸರ್ವಆತ್ಮಾನೇನಬ್ರಹ್ಮ
ಸರ್ವ ಜೀವಿಯಲ್ಲಿ ದೇವರಿದ್ದಾನೆ
ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ!
ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ
ಅವನ ಪಾಪಕರ್ಮ ಅವನ ಸುಡುತ್ತದೆ!
ಕಲಿಯುಗದಲ್ಲಿ ದೇವರು ಕಲ್ಲಲ್ಲಾ
ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ
ಉಂಟು!
ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ!
ಮದಕ್ಕೆ ಕಾರುಣ್ಯದ ಅರಿವಿಲ್ಲಾ!
👨👩👧😭 pic.twitter.com/UrzswPwE6i— ನವರಸನಾಯಕ ಜಗ್ಗೇಶ್(modi ka parivar) (@Jaggesh2) June 11, 2024