ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ನಡುವೆ ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಯಿಂದ ಕರೆ ಬಂದಿದ್ದು, ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ.