ಬೆಂಗಳೂರು: ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ಪತ್ನಿ ಸಪ್ನಾ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ನಟ ಅಜಯ್ ರಾವ್ ಫಸ್ಟ್ ರಿಯಾಕ್ಷನ್ ಮುಂದಿದೆ ಓದಿ.
ಈ ಕುರಿತಂತೆ ಸ್ಯಾಂಡಲ್ ವುಡ್ ನಟ ಅಜಯ್ ರಾವ್ ಪ್ರತಿಕ್ರಿಯಿಸಿದ್ದು, ಇದು ನನ್ನ ವೈಯಕ್ತಿಕ ವಿಚಾರವಾಗಿದೆ. ನಾನು ಬಗೆಹರಿಸಿಕೊಳ್ಳುತ್ತೇನೆ. ನಾನು ನನ್ನದೇ ಆದ ರೀತಿಯಲ್ಲಿ ಹ್ಯಾಂಡಲ್ ಮಾಡುತ್ತೇನೆ ಎಂದಿದ್ದಾರೆ.
ಈಗ ನಾನು ಪ್ರತಿಕ್ರಿಯಿಸಿದ್ರೇ ಮಗಳ ಭವಿಷ್ಯಕ್ಕೆ ತೊಂದರೆ ಆಗಲಿದೆ. ನನ್ನ ಮಗಳ ಭವಿಷ್ಯಕ್ಕೆ ಇದು ತೊಂದರೆ ಆಗೋದು ಬೇಡ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ನಟ ಅಜಯ್ ರಾವ್ ಹಾಗೂ ಪತ್ನಿ ಸಪ್ನಾ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿರುವುದನ್ನು ಖಚಿತ ಪಡಿಸಿದ್ದಾರೆ.
ಕರ್ನಾಟಕದಲ್ಲಿ ‘ಪೈಲೆಟ್ ಸಮಯ ಪ್ರಜ್ಞೆ’ಯಿಂದ ತಪ್ಪಿದ ಭಾರೀ ‘ವಿಮಾನ ದುರಂತ’
ರೈತರ ಗಮನಕ್ಕೆ: ಹಸು, ಕುರಿ, ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ