ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್ದೀಪ್ ರಾಯ್ ಅವರ ಹೆಲ್ತ್ ಅಪ್ಡೇಟ್ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್ದೀಪ್ ರಾಯ್ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ