ಬೆಂಗಳೂರು: ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ( Actor Prajwal Devaraj ) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಅನ್ನೋ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದ್ರೇ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ.
ಸ್ಯಾಂಡಲ್ ವುಡ್ ಯುವ ನಟ ಪ್ರಜ್ವಲ್ ದೇವರಾಜ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಅನ್ನೋ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರು.
ಈ ವೈರಲ್ ಸುದ್ದಿಯನ್ನು ಗಮನಿಸಿದಂತ ನಟ ಪ್ರಜ್ವಲ್ ದೇವರಾಜ್ ಅವರ ಕುಟುಂಬದ ಮೂಲಗಳು, ಹೀಗೆ ಹರಿದಾಡುತ್ತಿರೋ ಸುದ್ದಿ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಆರೋಗ್ಯವಾಗಿರೋರ ಬಗ್ಗೆ ಹೀಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಅಂತ ಗರಂ ಆಗೇ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ವರದಿಗಳೆಲ್ಲ ಸತ್ಯಕ್ಕೆ ದೂರವಾದದ್ದಾಗಿವೆ. ಅವರು ಆರೋಗ್ಯವಾಗಿದ್ದಾರೆ. ಅವರು ಅನಾರೋಗ್ಯಕ್ಕೂ ಒಳಗಾಗಿಲ್ಲ, ನಿಧನವಾಗಿಯೂ ಇಲ್ಲ. ಇಂತಹ ಪೋಸ್ಟ್ ಗಳನ್ನು ಹಾಕಬೇಡಿ. ಇದು ಮುಂದುವರೆದರೇ ಕಿಡಿಗೇಡಿಗಳ ವಿರುದ್ಧ ಕಾನೂನು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ್ದಾರೆ.
BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆ