ಬೆಂಗಳೂರು: ಹಂಪಿ ಉತ್ಸವದಲ್ಲಿ ನೃತ್ಯ ಪ್ರದರ್ಶನವನ್ನು ನಟಿ ನಿಮಿಕಾ ರತ್ನಾಕರ್ ನೀಡಲಿದ್ದಾರೆ. ದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.
ಹಂಪಿ ಎಂದರೇನೇ ಅದೇನೋ ಆಕರ್ಷಣೆ. ನಿಮಿಕಾ ರತ್ನಾಕರ್ ಪಾಲಿಗೂ ಅಂಥಾದ್ದೊಂದು ಸೆಳೆತವಿದೆಯಂತೆ. ಆದರೆ ಈ ವರೆಗೂ ಅಲ್ಲಿಗೆ ಭೇಟಿ ಕೊಡುವ ಅವಕಾಶ ಕೂಡಿ ಬಂದಿರಲಿಲ್ಲ. ಕೆಲ ಹಾಡುಗಳ ಮೂಲಕವಷ್ಟೇ ಹಂಪಿಯನ್ನು ಕಣ್ತುಂಬಿಕೊಂಡಿದ್ದ ತಮ್ಮ ಪಾಲಿಗೆ ಆ ಪರಿಸರದಲ್ಲಿ ಬೆರೆಯುವ ಅವಕಾಶ ಸಿಕ್ಕಿದ್ಚದು ಖುಷಿ ಕೊಟ್ಟಿದೆ ಅಂತ ಅವರು ಹೇಳಿದ್ದಾರೆ. ಈ ನಡುವೆ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ. ಯಾಕೆಂದರೆ, ಉತ್ತರ ಕರ್ನಾಟಕ ಮಂದಿಯ ಪ್ರೀತಿ, ಅಭಿಮಾನ ಪಡೆದುಕೊಂಡಿರುವ ಅವರಿಗೆ, ಅಭಿಮಾನಿಗಳ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಸುಯೋಗ ಕೂಡಿ ಬಂದಿದೆ. ಅಂದ ಹಾಗೇ ನಟಿ ನಿಮಿಕಾ ರತ್ನಾಕರ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ ಎಂಬ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡಿಗರ ಮನಗೆದಿದ್ದಾರೆ.