ಬೆಂಗಳೂರು: ಮಾದನಾಯಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಂತ ನಟ, ನಿರ್ದೇಶಕ ಗುರುಪ್ರಸಾದ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಇಂದೇ ವಿಲ್ಸನ್ ಗಾರ್ಡನ್ ನಲ್ಲಿರುವಂತ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಸಾಲಗಾರರ ಕಾಟಕ್ಕೆ ಬೇಸತ್ತು ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿತ್ತು. ಅವರ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಇದೀಗ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿರುವುದಾಗಿ ತಿಳಿದು ಬಂದಿದೆ.
ವಿಕ್ಟೋರಿಯ ಆಸ್ಪತ್ರೆಯಿಂದ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರ ಪಾರ್ಥೀವ ಶರೀರವನ್ನು ವಿಲ್ಸನ್ ಗಾರ್ಡನ್ ನಲ್ಲಿರುವಂತ ವಿದ್ಯುತ್ ಚಿತಾಗಾರಕ್ಕೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ಇಂದೇ ಅಂತ್ಯಕ್ರಿಯೆಯನ್ನು ನೆರವೇರಿಸುವುದಾಗಿ ತಿಳಿದು ಬಂದಿದೆ.
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್