BREAKING : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಕೇಸ್ : ಮಾದಕ ನಟಿಯರಿಗೆ ‘ಇಡಿ’ ಸಂಕಷ್ಟ – Kannada News Now


State

BREAKING : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಕೇಸ್ : ಮಾದಕ ನಟಿಯರಿಗೆ ‘ಇಡಿ’ ಸಂಕಷ್ಟ

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿಸುವಂತ ನಟಿ ರಾಗಿಣಿ, ನಟಿ ಸಂಜನಾಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ಸಿಟಿ ಸಿವಿಲ್ ಆವರಣದ 33 ನೇ ಹಾಲ್ ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ 5 ದಿನಗಳ ಕಾಲ ಇಬ್ಬರನ್ನು ಜಾರಿ ನಿರ್ದೇಶನಾಲಯ (ಇಡಿ) ಅವಕಾಶ ಆದೇಶ ಹೊರಡಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಪ್ರತ್ಯೇಕ ವಿಚಾರಣೆ ನಡೆಸಲು ಮುಂದಾಗಿದೆ. ಡ್ರಗ್ ಮಾಫಿಯಾದಲ್ಲಿ ಅಕ್ರಮ ಸಂಪಾದನೆ ಬಗ್ಗೆ ಇಡಿ ಅಧಿಕಾರಿಗಳು ನಾಳೆ ಸಂಜನಾ, ರಾಗಿಣಿ ವಿಚಾರಣೆ ನಡೆಸಲಿದ್ದಾರೆ. ನಾಳೆಯಿಂದ ಜೈಲಿಗೆ ಹೋಗಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಇನ್ನೂ, ಎನ್ ಡಿ ಪಿ ಎಸ್ ಕೋರ್ಟ್ ನಲ್ಲಿ ನಟಿ ರಾಗಿಣಿ, ನಟಿ ಸಂಜನಾ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನ್ಯಾಯಪೀಠ ನಡೆಸಿತು. ಇಂತಹ ವಿಚಾರಣೆಯ ಸಂದರ್ಭದಲ್ಲಿ ಸರ್ಕಾರಿ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಈ ಹಿನ್ನಲೆಯಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಈ ಮೂಲಕ ನಟಿ ರಾಗಿಣಿ, ಸಂಜನಾ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಜೈಲು ಫಿಕ್ಸ್ ಆಗಿದೆ.

ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೋನಾ ದೃಢ
error: Content is protected !!