ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶರಾಗಿದ್ದಾರೆ. ಸುಮಾರು 800ಕ್ಕೂ ಹೆಚ್ಚು ಸಂಗೀತ ಆಲ್ಬಂ ಹೊರತಂದಿದ್ದಾರೆ. ಇದಲ್ಲದೇ 90ರ ದಶಕದಲ್ಲಿ ಅವರು ಕೆಲಕಾಲ ಆದರ್ಶ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿ ಕೂಡ ಅವರು ಕೆಲಸ ಮಾಡಿದ್ದರು. ಅವರು 2000ರಲ್ಲಿ “ಗಾಳಿ ಮಾತು” ಎಂಬ ಚಲನಚಿತ್ರವನ್ನು ಸಹ ನಿರ್ದೇಶಿಸಿದ್ದಾರೆ. ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ ಎನ್ನಲಾಗಿದೆ. ಇನ್ನೂ ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಗುರುವಾರ … Continue reading ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಇನ್ನಿಲ್ಲ