ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದಂತ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದವರು ನಿರ್ದೇಶಕ ಮುರುಳಿ ಮೋಹನ್. ಇಂತಹ ಅವರು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ನಿರ್ದೇಶಕ ಮುರುಳಿ ಮೋಹನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಅಂದಹಾಗೇ ನಿರ್ದೇಶಕ ಮುರಳಿ ಮೋಹನ್ ಅವರು ಐದಾರು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೇ ತಮ್ಮ ಚಿಕಿತ್ಸೆಗೆ ಹಣದ ಅವಶ್ಯಕತೆ ಇದೆ ಎಂಬುದಾಗಿಯೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಖ್ಯಾತಿ ಪಡೆದಿರುವವರು ಮುರಳಿ ಮೋಹನ್. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಸಂತ’, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ನಾಗರಹಾವು’, ಕ್ರೇಜಿ ಸ್ಟಾರ್ ರವಿಚಂದ್ರನ್ ನಟನೆಯ ‘ಮಲ್ಲಿಕಾರ್ಜುನ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇಂತಹ ಅವರು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 32 ಅಡಿ ಆಳ, 25 ಅಡಿ ಉದ್ದ, 12 ಅಡಿ ಅಗಲ ತೆಗೆದರು ದೊರೆಯದ ಅಸ್ಥಿಪಂಜರ
ಕಚೇರಿಗೆ ತೆರಳುವಾಗ ಸಂಭವಿಸಿದಂತ ಅಪಘಾತದಲ್ಲೂ ನೌಕರ ಪರಿಹಾರಕ್ಕೆ ಅರ್ಹ: ಸುಪ್ರೀಂ ಕೋರ್ಟ್