ಬೆಂಗಳೂರು: ಕನ್ನಡ ಚಿತ್ರರಂಗದಲ್ಲೂ ಕೇಳಿ ಬಂದಿರುವಂತ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆಗೆ ಸಮಿತಿಯೊಂದನ್ನು ರಚಿಸುವ ಸಂಬಂಧ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮಹತ್ವದ ಸಭೆಯನ್ನು ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ ಸುರೇಶ್ ಅವರು, ರಾಜ್ಯ ಮಹಿಳಾ ಆಯೋಗದವರ ಮನವಿ ಮೇರೆಗೆ ಮಂಡಳಿಯಲ್ಲಿ ಇಂದು ಸಭೆಯನ್ನು ಕರೆಯಲಾಗಿದೆ. ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಲೈಂಗಿಕ ಶೋಷಣೆಯ ಬಗ್ಗೆ ಈ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಇದುವರೆಗೂ ಲೈಂಗಿಕ ಶೋಷಣೆ ಕುರಿತು ಯಾವುದೇ ದೂರುಗಳು ಬಂದಿಲ್ಲ. ಒಂದು ವೇಳೆ ಬಂದರೇ ಅಂತಹವರ ವಿರುದ್ಧ ಮಂಡಳಿಯು ತನ್ನದೇ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳನ್ನು ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂದರು.
ಇಂದಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆಗೆ ಎಲ್ಲರಿಗೂ ಆಹ್ವಾನ ಕೊಟ್ಟಿದ್ದೇವೆ. ಈ ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಭಾಗಿಯಾಗಲಿದ್ದಾರೆ. ಅಲ್ಲದೇ ಕನ್ನಡ ಚಿತ್ರೋದ್ಯಮದ ಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಮದುವೆಯಾದ ’40 ದಿನ’ಗಳಲ್ಲೇ ವಿಚ್ಛೇದನ ಕೋರಿದ ಮಹಿಳೆ: ಕಾರಣ ಏನು ಗೊತ್ತಾ?