ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ. ಅಲ್ಲದೇ ಪುಟ್ಟಣ್ಣ ಕಣಗಾಲ್, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.
ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2019ನೇ ಕ್ಯಾಲೆಂಡರ್ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ.ವಿಷ್ಣುವರ್ಧನ್ ಪ್ರಶಸ್ತಿ, ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಹೀಗಿದೆ 2019ನೇ ಸಾಲಿನ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ನಗದ ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.
ಪುಟ್ಟಣ ಕಣ್ಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್ ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 5 ಲಕ್ಷ ನಗದು, 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.
ಡಾ.ವಿಷ್ಣು ವರ್ಧನ್ ಪ್ರಶಸ್ತಿಗೆ ನಿರ್ಮಾಪಕ, ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೋ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ನಗದ ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.
ಇನ್ನೂ 2019ನೇ ಸಾಲಿನ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿಯನ್ನು ಬೆಳ್ಳಿ ತೊರೆ-ಸಿನಿಮಾ ಪ್ರಬಂಧಗಳಿಗೆ ನೀಡಲಾಗಿದೆ. ಇದರ ಲೇಖಕರು ರಘುನಾಥ.ಚ.ಹ ಆಗಿದ್ದಾರೆ. ಇದು 20,000 ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕ ಒಳಗೊಂಡಿದೆ.
2019ನೇ ವರ್ಷದ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಗುಳೆ ಆಯ್ಕೆ ಮಾಡಲಾಗಿದೆ. ಇದರ ನಿರ್ಮಾಪಕರು ಮನೋಹರ್ ಎಸ್ ಐಯರ್ ಆಗಿದ್ದಾರೆ. ಇದು 25,000 ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕವನ್ನು ಒಳಗೊಂಡಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಅ.30ರ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting
ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ








