ಕೆಎನ್‌ಎನ್‌ಸಿನಿಮಾಡೆಸ್ಕ್:ಸ್ಟಾರ್ ಯಶ್ ಹುಟ್ಟುಹಬ್ಬ ಹಿನ್ನೆಲೆ ‘ಟಾಕ್ಸಿಕ್’ ಸಿನಿಮಾದ ಅಪ್ಡೇಟ್ಸ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಇಂದು38ನೇ ವಸಂತಕ್ಕೆ ಕಾಲಿಡಲಿದ್ದಾರೆ ಕೆಜಿಎಫ್ ಸ್ಟಾರ್. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಸಜ್ಜಾಗಿದ್ದಾರೆ. ಆದರೆ ನಟ ಯಶ್ ಅವರು ಕೆಲ ದಿನಗಳ ಹಿಂದೆ ಇಂದು ತಮ್ಮೊಟ್ಟಿಗೆ ಇರುವುದಿಲ್ಲ ಅಂತ ಹೇಳಿಕೊಂಡಿದ್ದಾರೆ.
ಜನವರಿ 8..
ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ..
ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ
ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ
ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ
ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ..
ನಿಮ್ಮಗಳ ಅಭಿಮಾನ
ನನ್ನ ಅನುಪಸ್ಥಿತಿಯನ್ನ
ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು..
ಸದಾಕಾಲ ನನ್ನ ಜೊತೆ ಇರುವ
ನಿಮ್ಮ ಪ್ರೀತಿ, ಅಭಿಮಾನವೇ
ನನಗೆ ಹುಟ್ಟುಹಬ್ಬದ ಉಡುಗೊರೆ..
ನಿಮ್ಮ ಪ್ರೀತಿಯ
ಯಶ್
ಈ ಮೇಲ್ಕಂಡ ರೀತಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.