ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 2616.93 ಲೀಟರ್ (ರೂ.7,76,648 ಮೌಲ್ಯ) ಮದ್ಯ ವಶಪಡಿಸಿಕೊಂಡು 8 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 2615.49 ಲೀಟರ್ (ರೂ.776008 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 1.41 ಲೀಟರ್ (ರೂ.640 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ.
ಸಂಡೂರು ವಿಧಾನಸಭೆ ಉಪಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 9 ಫ್ಲೆಯಿಂಗ್ ಸ್ಕ್ವಾಡ್ 1 ಎಸ್‌ಎಸ್‌ಟಿ ತಂಡ ಮತ್ತು 4 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ
ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ