ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಅಂತಿಮ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ನ.13 ರಂದು ಬೆಳಿಗ್ಗೆ 05.30 ಗಂಟೆಗೆ ರಾಜಕೀಯ ಪಕ್ಷಗಳ ಮುಖಂಡರ ಸಮಕ್ಷಮದಲ್ಲಿ ಅಣಕು ಮತದಾನ ನಡೆಯಲಿದೆ. ನಂತರ ಬೆಳಿಗ್ಗೆ 07 ಗಂಟೆಯಿAದ ಮತದಾನ ಪ್ರಕ್ರಿಯೆ ಆರಂಭಗೊAಡು ಸಂಜೆ 06 ಗಂಟೆಯವರೆಗೆ ನಡೆಯಲಿದೆ. ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದಾರೆ. 1,17,935 ಪುರುಷ ಮತದಾರರು, 1,18,438 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಗಳಿವೆ ಎಂದು ಮಾಹಿತಿ ನೀಡಿದರು.
ನಗರ ವ್ಯಾಪ್ತಿಯಲ್ಲಿ 68 ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 185 ಮತದಾನ ಕೇಂದ್ರಗಳಿವೆ. ಸಂಡೂರು 17, ತೋರಣಗಲ್ಲು 27 ಮತ್ತು ಚೋರನೂರು 16 ಮತಗಟ್ಟೆ ಸೇರಿ ಒಟ್ಟು 60 ಮತಗಟ್ಟೆ ಗಳನ್ನು ಕ್ರಿಟಿಕಲ್ ಮತಗಟ್ಟೆ ಕೇಂದ್ರಗಳೆAದು ಗುರುತಿಸಲಾಗಿದೆ ಎಂದರು.
ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಸಂಡೂರು ವಿಧಾನಸಭೆ ಉಪಚುನಾವಣೆಗೆ 324 ಬ್ಯಾಲೆಟ್ ಯುನಿಟ್, 324 ಕಂಟ್ರೋಲ್ ಯುನಿಟ್ ಮತ್ತು 379 ವಿವಿಪ್ಯಾಟ್ ಮತಯಂತ್ರಗಳನ್ನು ಬಳಸಲಾಗುವುದು. ಹೆಚ್ಚುವರಿಯಾಗಿ 304 ಬ್ಯಾಲೆಟ್ ಯುನಿಟ್, 304 ಕಂಟ್ರೋಲ್ ಯುನಿಟ್ ಮತ್ತು 329 ವಿವಿಪ್ಯಾಟ್ ಮತಯಂತ್ರಗಳು ಇರಿಸಲಾಗಿದೆ ಎಂದರು.
ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ತಪ್ಪದೇ ಮತದಾನ ಮಾಡಿ:
ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ತಪ್ಪದೇ ಪಾಲ್ಗೊಳ್ಳಲು ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಅರೆ ಎಲ್ಲ ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಿರುವುದರಿಂದ ಪ್ರತಿಯೊಬ್ಬರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. ಸಂಡೂರು ಭಾಗದಲ್ಲಿ ಹೆಚ್ಚು ಕೈಗಾರಿಕಾ ವಲಯ ಇರುವುದರಿಂದ ಎಲ್ಲಾ ಕಾರ್ಮಿಕರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ:
ಸಂಡೂರು ವಿಧಾನಸಭೆ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಮುಗಿದ ನಂತರ ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಮತಯಂತ್ರಗಳ ಡಿ-ಮಸ್ಟರಿಂಗ್ ಕಾರ್ಯ ಇಲ್ಲಿಯೇ ನಡೆಸಲಾಗುವುದು. ಬಳಿಕ ಮತಯಂತ್ರಗಳನ್ನು ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಸ್ಥಳಾಂತರಿಸಲಾಗುವುದು. ಇಲ್ಲಿಯೇ ನ.23 ರಂದು ಮತದಾನ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಮಾತನಾಡಿ, ಸಂಡೂರು ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿ ಚುನಾವಣೆ ನಡೆಸಲು ಅಗತ್ಯ ಬಂದೋಬಸ್ತ್ ಮಾಡಲಾಗಿದೆ. ಸುಮಾರು 1036 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಸಿಬ್ಬಂದಿ ವ್ಯವಸ್ಥೆ:
ಸಿವಿಲ್ ಪೊಲೀಸ್-676, ಡಿವೈಎಸ್ಪಿ 03, ಪಿಐ 06, ಪಿಎಸ್‌ಐ 14, ಎಎಸ್‌ಐ 22, ಹೆಚ್‌ಸಿ 190, ಕಾನ್ಸ್ ಟೇಬಲ್ 281, ಗೃಹರಕ್ಷಕ ದಳ 160, ಕೆಎಸ್‌ಆರ್‌ಪಿ 360 ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಒಟ್ಟು 1036 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.
127 ಮತಗಟ್ಟೆ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಸೌಲಭ್ಯ ಮಾಡಲಾಗಿದೆ. ನ.01 ರಿಂದ ಇಲ್ಲಿಯವರೆಗೆ ವಿವಿಧ ಚೆಕ್ ಪೋಸ್ಟ್ಗಳಲ್ಲಿ 34,15,598 ರೂ. ನಗದು ಜಪ್ತಿ ಮಾಡಲಾಗಿದೆ. ಹಾಗೆಯೇ 9,49,537 ರೂ. ಮೌಲ್ಯದ 2923.970 ಲೀ. ಮದ್ಯ ಜಪ್ತು ಮಾಡಿದ್ದು, ಒಟ್ಟು 135 ಪ್ರಕರಣ ದಾಖಲಿಸಿಕೊಂಡು 116 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅದರಲ್ಲಿ 06 ದ್ವಿಚಕ್ರ ವಾಹನ, 1 ಲಾರಿ, 1 ಕಾರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ನೀತಿ ಸಂಹಿತೆ ಉಲ್ಲಂಘನೆ ಅಡಿ ಮೂರು ಪ್ರಕರಣ ದಾಖಲಾಗಿದ್ದು, ಕಾರು ಮತ್ತು ಕ್ರೇನ್ ವಾಹನ ಜಪ್ತು ಮಾಡಲಾಗಿದೆ. ಸಿ-ವಿಜಿಲ್ ತಂತ್ರಾAಶದಲ್ಲಿ 20 ದೂರು ದಾಖಲಾಗಿದ್ದು, ಇತ್ಯರ್ಥ ಮಾಡಲಾಗಿದೆ ಎಂದರು.
ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 02 ಸಖಿ ಬೂತ್‌ಗಳು, 01 ವಿಶೇಷ ಚೇತನ ಮತಗಟ್ಟೆ, 01 ಯುವ ಮತದಾರರ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಂಡೂರು ಕ್ಷೇತ್ರದ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಸ್ವೀಪ್ ಸಮಿತಿ ವತಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೇಕಡಾವಾರು ಮತದಾನ ಹೆಚ್ಚಳಕ್ಕೆ ಶ್ರಮಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಅನಿಲ್ ಕುಮಾರ್, ತಾಪಂ ಇಓ ಷಡಕ್ಷರಯ್ಯ ಇದ್ದರು.
ಬಳ್ಳಾರಿ: ನ.14ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Watch Video: ಹಾಡಿ ನಿವಾಸಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಸ್ಟೆಪ್: ವೈರಲ್ ವೀಡಿಯೋ ಇಲ್ಲಿದೆ ನೋಡಿ