ಹೈದರಾಬಾದ್: ಕೆಲವು ಗುಂಪುಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಸಂಘ ಪರಿವಾರ ಎಂದಿಗೂ ವಿರೋಧಿಸುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.
ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, ಮೀಸಲಾತಿಯನ್ನು ಅಗತ್ಯವಿರುವಷ್ಟು ವಿಸ್ತರಿಸಬೇಕು ಎಂದು ಸಂಘ ಅಭಿಪ್ರಾಯಪಟ್ಟಿದೆ ಎಂದು ಹೇಳಿದರು.ಮೀಸಲಾತಿ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.
ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥರು ಕಳೆದ ವರ್ಷ ನಾಗ್ಪುರದಲ್ಲಿ ಹೇಳಿದ್ದರು.