ಸುಭಾಷಿತ :

Friday, April 3 , 2020 8:25 AM

ಅನಾರೋಗ್ಯದಿಂದ ಬಳಲುತ್ತಿದ್ದ ಜನಪ್ರಿಯ ನಟ, ರಂಗಕರ್ಮಿ ಸಂಜೀವ ಕುಲಕರ್ಣಿ ನಿಧನ


Sunday, January 26th, 2020 9:51 am

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜನಪ್ರಿಯ ನಿರೂಪಕ, ಕಿರುತೆರೆ ನಟ, ರಂಗಕರ್ಮಿ ಸಂಜೀವ ಕುಲಕರ್ಣಿ (49)ಯವರು ವಿಧಿವಶರಾಗಿದ್ದಾರೆ.

ಸಂಜೀವ ಕುಲಕರ್ಣಿಯವರು ಹಲವು ವರ್ಷಗಳಿಂದ ಕಾರ್ಡಿಯೋಮಪತಿ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಕೆಲದಿನಗಳಿಂದ ಅರೋಗ್ಯ ಕ್ಷೀಣಿಸಿದ್ದು, ನಗರದ ನಾರಾಯಣ ಹೃದಯ ವಿಜ್ಞಾನಸಂಸ್ಥೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನ ಹೊಂದಿದ್ದಾರೆಂದು ವರದಿಗಳು ತಿಳಿಸಿವೆ.

ಕುಲಕರ್ಣಿಯವರು ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ನಿರೂಪಕರೂ ಆಗಿದ್ದು, ವಿವಿಧ ಕಾರ್ಯಕ್ರಮಗಳ ವೇದಿಕೆಯಲ್ಲಿ ನಿರೂಪಣೆ ಮಾಡಿ ಮೆಚ್ಚುಗೆ ಗಳಿಸಿದ್ದಾರೆ. ಇವರ ಅಂತ್ಯಕ್ರಿಯೆ ಚಾಮರಾಮಪೇಟೆಯ ಟಿಆರ್’ ಮಿಲ್ ಬಳಿಯ ಸ್ಮಶಾನದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions