ಚಾಮರಾಜನಗರ: ಸಂಕ್ರಾಂತಿ ಹಬ್ಬಕ್ಕೆ ವಸ್ತುಗಳನ್ನು ಖರೀದಿ ಮಾಡಲು ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿರುವವರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಸಂತೋಷ್ (32), ಅವರ ಪತ್ನಿ ಸೌಮ್ಯ (27), ಪುತ್ರಿ ನಿತ್ಯಾ ಸಾಕ್ಷಿ (4) ಮತ್ತು ಪುತ್ರ ಅಭಿಷೇಕ್ (9) ಆಗಿದ್ದಾರೆ. ಪ್ರಕರಣವನ್ನು ಕೊಳ್ಳೆಗಾಲ ಗ್ರಾಮಾಂತರ ಪೊಲೀಸರು ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಅಂತ ತಿಳಿದು ಬಂದಿದೆ.