ಬೆಂಗಳೂರು: ಮುಂಗಾರಿನಲ್ಲಿ ಬಂದ ಬರಕ್ಕೆ ಸಂಕ್ರಾಂತಿಯಲ್ಲಿ ಬಿಡಿಗಾಸು ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರೋ ಅವರು, ಕಳೆದ ವರ್ಷ ಜೂನ್ ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ’ ಕೇವಲ ₹105 ಕೋಟಿ ಬಿಡುಗಡೆ ಮಾಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಗುಡುಗಿದ್ದಾರೆ.
ನಾನು ಕಂದಾಯ ಸಚಿವನಾಗಿದ್ದಾಗ 2022 ನೇ ಸಾಲಿನಲ್ಲಿ 13,09,421 ಹೆಕ್ಟೇರ್ ಕೃಷಿ ಜಮೀನಿನಲ್ಲಿ ಬೆಳೆ ಹಾನಿಯಾಗಿತ್ತು. ಆಗ 14.62 ಲಕ್ಷಕ್ಕೂ ಹೆಚ್ಚು ರೈತರಿಗೆ 2031.15 ಕೋಟಿ ರೂ. ನೀಡಲಾಯಿತು ಎಂದು ಕಿಡಿಕಾರಿದ್ದಾರೆ.
ಮಳೆಯಾಶ್ರಿತ ಜಮೀನಿಗೆ ಹೆಕ್ಟೇರ್‌ಗೆ 6,800 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 6,800 ರೂ. ಸೇರಿಸಿ, ಒಟ್ಟು 13,600 ರೂ. ನೀಡಲಾಯಿತು. ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 13,500 ರೂ. ಮಾರ್ಗಸೂಚಿ ದರವಿದ್ದು, ಅದಕ್ಕೆ ರಾಜ್ಯ ಸರ್ಕಾರದಿಂದ 11,500 ರೂ. ಸೇರಿಸಿ ಒಟ್ಟು 25,000 ರೂ. ನೀಡಲಾಯಿತು. ಬಹುವಾರ್ಷಿಕ ಬೆಳೆ ಜಮೀನಿಗೆ 18,000 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ 10,000 ರೂ. ಸೇರಿಸಿ ಒಟ್ಟು 28,000 ರೂ. ನೀಡಲಾಯಿತು ಎಂದಿದ್ದಾರೆ.
ಆದರೆ ಸಿದ್ಧರಾಮಯ್ಯ ಅವರ ಸರ್ಕಾರ ಕೇವಲ ₹105 ಕೋಟಿ ನೀಡಿ ರೈತರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.
ಮುಂಗಾರಿನಲ್ಲಿ ಬಂದ ಬರಕ್ಕೆ
ಸಂಕ್ರಾಂತಿಯಲ್ಲಿ ಬಿಡಿಗಾಸು ಪರಿಹಾರಕಳೆದ ವರ್ಷ ಜೂನ್ ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ 'ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ' ಕೇವಲ ₹105 ಕೋಟಿ ಬಿಡುಗಡೆ ಮಾಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ.
ನಾನು ಕಂದಾಯ… pic.twitter.com/kvpedZcWcf
— R. Ashoka (ಆರ್. ಅಶೋಕ) (@RAshokaBJP) January 6, 2024
BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1
BREAKING: ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು