ಬೆಂಗಳೂರು: ಸಂತೇಬೆನ್ನೂರಿನ ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ ಪ್ರಕರಣವನ್ನು ಇಲಾಖಾ ತನಿಖೆಗೆ ವಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ಟಿಸ್ಟ್ ಸಿಕ್ಕಂತೆ ಆಗಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೆಆರ್ ಐಡಿಎಲ್ ಕುರಿತ ಈ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಎಸಿಎಸ್ ಆರ್ ಡಿಪಿಆರ್ ಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಇನ್ನೂ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ ಆತ್ಮಹತ್ಯೆ ಪ್ರಕರಣದ ಸಂಬಂಧ ಕೆಆರ್ ಐಡಿಎಲ್ ಎಂಜಿನಿಯರಿಂಗ್ ನಿಗಮವಾಗಿದ್ದು, ಉಪ ಗುತ್ತಿಗೆಯನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
https://twitter.com/PriyankKharge/status/1796457994311680430