ಶಿವಮೊಗ್ಗ: ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರು ವಿದ್ಯಾರ್ಥಿಗಳು, ಪೋಷಕರಿಂದ ಹಲ್ಲೆಗೊಳಗಾಗಿದ್ದರು. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಹಲ್ಲೆಗೊಳಗಾಗಿದ್ದ ಉಪನ್ಯಾಸಕರನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರ ಸೂಚನೆಯ ಮೇರೆಗೆ ಇಂದು ಆಸ್ಪತ್ರೆಗೆ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಅಲ್ಲದೇ ಉಪನ್ಯಾಸಕ ರಾಜು ಅವರಿಗೆ ಧೈರ್ಯವನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತುಂಬಿದರು.
ಆನಂತ್ರ ಸಾಗರ ತಾಲ್ಲೂಕು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರನ್ನು ಭೇಟಿಯಾದಂತ ಸಂಘದ ಪದಾಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೂ ಮನವಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ.ಡಿ.ಕೆ, ಸುರೇಶ್ ಜಂಬಾನಿ, ವಿಜಯ್ ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದಂತ ಸಣ್ಣಹನುಮಂತಪ್ಪ ಸೇರಿದಂತೆ ಇತರರು ಹಾಜರಿದ್ದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ
ಮಹಾರಾಷ್ಟ್ರ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ.? ಇಲ್ಲಿದೆ ಪಟ್ಟಿ | Maharashtra portfolio allocation