ಕೆಎನ್‌ಎನ್‌ಸಿನಿಮಾಡೆಸ್ಕ್:ಶೃತಿ ಹರಿಹರನ್ ಮುಖ್ಯಭೂಮಿಕೆಯ ‘ಸಾರಾಂಶ’ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ.
ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಸದರಿ ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ. ನಿರ್ದೇಶಕ ಸೂರ್ಯ ವಸಿಷ್ಠ ಮಾತನಾಡಿ, “ಇದು ಈ ದಿನಮಾನಕ್ಕೆ ಅತ್ಯಂತ ಅಪರೂಪವೆಂಬಂಥ ಗುಣಲಕ್ಷಣಗಳನ್ನು ಒಳಗೊಂಡಿರುವ ಚಿತ್ರ. ನಾನು ಒಂದು ಮುಖ್ಯ ಪಾತ್ರಕ್ಕೆ ಜೀವ ತುಂಬಿದ್ದೇನೆ. ಇದರ ಜೊತೆಗೆ ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ ಅಂತ ತಿಳಿಸಿದರು. ಇನ್ನೂ ದೀಪಕ್ ಸುಬ್ರಮಣ್ಯ, ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಸೇರಿದಂತೆ ಮುಂತಾದವರು ‘ಸಾರಾಂಶ’ದಲ್ಲಿ ಅಭಿನಯಿಸಿದ್ದಾರೆ. ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನವಿದೆ. ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ರಾಗಿದ್ದಾರೆ. ರವಿ ಕಶ್ಯಪ್ ಮತ್ತು ಆರ್.ಕೆ.ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದೇ ಫೆಬ್ರವರಿ 15ರಂದು ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.