ಜೈಪುರ: ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಅವರು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸರಸ್ವತಿ ದೇವಿಯ ವಿಗ್ರಹಗಳನ್ನು ಸ್ಥಾಪಿಸಲು ಮತ್ತು ಡ್ರೆಸ್ ಕೋಡ್ ಜಾರಿಗೆ ತರಲು ಆದೇಶಿಸಿದ್ದಾರೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಶಾಲೆಯ ಮುಖ್ಯ ಪ್ರವೇಶದ್ವಾರದಲ್ಲಿ ಸರಸ್ವತಿ ದೇವಿಯ ವಿಗ್ರಹವನ್ನು ಸ್ಥಾಪಿಸುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಲ್ಲದೆ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಜಾರಿಗೆ ತರಲಾಗುವುದು. ಈ ಡ್ರೆಸ್ ಕೋಡ್ ಅನ್ನು ವಿದ್ಯಾರ್ಥಿಗಳ ವಯಸ್ಸು ಮತ್ತು ಲಿಂಗದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.
ಶಾಲೆಗಳಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದು, . ಸರಸ್ವತಿ ಮಾತೆಯ ಚಿತ್ರವಿಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದು, ಇನ್ನೂ ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ವಯವಾಗಲಿದೆ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.