ಬೆಂಗಳೂರು: ನಾಳೆ ಬೆಂಗಳೂರಲ್ಲಿ “ಸರ್ವೋದಯ ದಿನ”ದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ.
ದಿನಾಂಕ: 30.01.2024ರ ಮಂಗಳವಾರ “ಸರ್ವೋದಯ ದಿನ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.
ಇನ್ನೂ ನಾಳೆ ಬೆಳಿಗ್ಗೆ 9 ಗಂಟೆಗೆ ಸರ್ವೋದಯ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಆಡಳಿತಗಾರರು, ಮುಖ್ಯ ಆಯುಕ್ತರು ಹಾಗೂ ಇನ್ನಿತರೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut