ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣ ಮುಂದಿಟ್ಟುಕೊಂಡು ಒಕ್ಕಲಿಗ ನಾಯಕತ್ವಕ್ಕೆ ಯತ್ನಿಸುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್ ನಾನು ಹಲವು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷ ನಾಗಿರುವುದಕ್ಕೆ ಆತ್ಮ ತೃಪ್ತಿದೆ ಬಿಜೆಪಿ ಸೃಷ್ಟಿಯ ಒಕ್ಕಲಿಗ ನಾಯಕತ್ವ ಬೇಕಿಲ್ಲ ಎಂದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಒಕ್ಕಲಿಗರ ನಾಯಕನಾಗುವ ಪ್ರಯತ್ನ ಮಾಡುತ್ತಿಲ್ಲ, ಅದರೆ ಒಕ್ಕಲಿಗನಾಗಿ ಹುಟ್ಟಿದ್ದೇನೆ ಮತ್ತು ಸಮುದಾಯಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತೇನೆ, ಒಕ್ಕಲಿಗ ನಾಯಕತ್ವ ಬಿಜೆಪಿಯ ಸೃಷ್ಟಿ, ತನಗೆ ಆ ನಾಯಕತ್ವ ಬೇಕಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕನಾಗಿ ಗುರುತಿಸಿಕೊಂಡಿದ್ದೇನೆ, ಕಳೆದ 4 ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಮತ್ತು ತಾನು ಮಾಡುತ್ತಿರುವ ಕೆಲಸ ಆತ್ಮತೃಪ್ತಿ ನೀಡಿದೆ ಎಂದು ಶಿವಕುಮಾರ್ ಹೇಳಿದರು.