ಉಡುಪಿ : ಹಿಂದೂ ಧರ್ಮದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ‘ ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ’ ಕಿಡಿಕಾರಿದ್ದಾರೆ.
BIGG NEWS : ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಮಹಿಳೆಯರು ಸಾವು
ಮಾಧ್ಯಮಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ ಅವರು ,ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಸತೀಶ್ ಆಳವಾದ ಅಧ್ಯಯನ ಮಾಡದೇ ಮಾತಾಡಿದ್ದಾರೆ. ಸತೀಶ್ ಅಲ್ವ ಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಜಾರಕಿಹೊಳಿ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆ ಯಾಗಿದೆ. ಸತೀಶ್ ಹೇಳಿಕೆಯನ್ನು ಖಂಡಿಸಬೇಕು ಈ ಬಗ್ಗೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಮೌನ ಯಾಕೆ ? ಕಾಂಗ್ರೆಸ್ ನಾಯಕರ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಎಂದು ಪ್ರಶ್ನಿಸಿದ್ದಾರೆ.
BIGG NEWS : ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಮಹಿಳೆಯರು ಸಾವು
ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದೇನು?
ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ.
#WATCH| "Where has 'Hindu' term come from?It's come from Persia…So, what is its relation with India? How's 'Hindu' yours? Check on WhatsApp, Wikipedia, term isn't yours. Why do you want to put it on a pedestal?…Its meaning is horrible:KPCC Working Pres Satish Jarkiholi (6.11) pic.twitter.com/7AMaXEKyD9
— ANI (@ANI) November 7, 2022
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ. ಹಿಂದೂ ಪದದ ಅರ್ಥವನ್ನು ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ ಎಂದು ಜಾರಕಿಹೊಳಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಈ ಪದ ಎಲ್ಲಿಂದ ಬಂದಿದೆಯೆಂದು ತಿಳಿಯಲು ವಿಕಿಪೀಡಿಯಾ ಚೆಕ್ ಮಾಡಿ ಎಂದು ಅವರು ಹೇಳಿದ್ದಾರೆ.
ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ.
BIGG NEWS : ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಮಹಿಳೆಯರು ಸಾವು