ಚಿತ್ರದುರ್ಗ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸತೀಶ್ ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಗಡಿ ಸಂಘರ್ಷದಿಂದ ಬೆಳಗಾವಿ ಬೆಳವಣಿಗೆ ಕುಂಠಿತವಾಗುತ್ತದೆ. ಯಥಾಸ್ಥಿತಿ ಕಾಯಿದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು ಹೇಳಿದರು.

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾಪುಂಡರು ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿಯುತ್ತಿದ್ದಾರೆ.

ಘಟನೆ ಕುರಿತು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಭಕ್ತರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದವರ ಮೇಲೆ ಹಲ್ಲೆ ಆಗಿಲ್ಲ. ಈ ರೀತಿಯ ಯಾವುದೇ ಪ್ರಕರಣ ಆಗಿಲ್ಲ. ಎರಡೂ ಕಡೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು . ಸಂಜೀವ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

BIGG NEWS : ತುಮಕೂರು ಜಿಲ್ಲೆಯಲ್ಲಿ ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ

‘ಕಬ್ಬು’ ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ರಾಜ್ಯ ಸರ್ಕಾರ ಆದೇಶ

Share.
Exit mobile version