ಬೆಂಗಳೂರು:ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಾತ್ರಿ ರಹಸ್ಯ ಸಭೆ ನಡೆಸಿದ್ದಾರೆ. ಡಿನ್ನರ್ ನೆಪದಲ್ಲಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದು ಸಚಿವರಾದ ಡಾ.ಜಿ. ಪರಮೇಶ್ವರ್, ಡಾ.ಹೆಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ ಸಭೆಯಲ್ಲಿ ಭಾಗವಹಿಸಿದ್ದಾರೆ. ರಾತ್ರಿ 9 ಗಂಟೆಯಿಂದ 11 ಗಂಟೆಯವರೆಗೆ ಮಾತುಕತೆ ನಡೆದಿದೆ.
ಸತೀಶ್ ಜಾರಕಿಹೊಳಿ ಡಿಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಪಟ್ಟು ಹಿಡಿದಿದ್ದಾರೆ.ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು.
3 ಡಿಸಿಎಂ ಹುದ್ದೆಗಳಿಂದ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ.