ಬೆಂಗಳೂರು : ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಗೆ ಬಂಧನದ ಭೀತಿ ಹಿನ್ನೆಲೆಯಲ್ಲಿ, ಅನಾರೋಗ್ಯ ಕಾರಣಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸತೀಶ್ ಸೈಲ್ ಅವರ ಮಧ್ಯಂತರ ಜಮೀನು ಅನ್ನು ನವೆಂಬರ್ 20ರವರೆಗೆ ವಿಸ್ತರಿಸಿತು.
ವಿಚಾರಣೆ ವೇಳೆ ಸತೀಶ್ ಸೈಲ್ ಆರೋಗ್ಯ ಸ್ಥಿತಿ ಬಗ್ಗೆ ಸ್ವತಂತ್ರ ಪರಿಶೀಲನೆ ನಡೆಸಲಾಗಿದ್ದು, ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯಲ್ಲಿ ಆರೋಗ್ಯ ಸ್ಥಿತಿ ಪರಿಶೀಲಿಸಲಾಗಿದೆ. ಎಂದು ಇಡಿ ಪರ ಎಎಸ್ಜಿ ಅರವಿಂದ್ ಕಾಮತ್ ಹೈಕೋರ್ಟ್ ಗೆ ಮಾಹಿತಿ ನೀಡಿದರು.
ಸತೀಶ್ ಸೈಲ್ ರ ವೈದ್ಯಕೀಯ ದಾಖಲೆಗಳನ್ನು ಒದಗಿಸಲಾಗುವುದು. ಲಿವರ್ ಕಸಿಯ ಅಗತ್ಯವಿದೆ ಎಂಬ ವೈದ್ಯಕೀಯ ವರದಿ ಇದೆ. ಎಂದು ಹೈಕೋರ್ಟ್ ಗೆ ಸತೀಶ್ ಸೈಲ್ ಪರ ವಕೀಲರು ಮಾಹಿತಿ ನೀಡಿದರು. ನ.15 ರಂದು ಬೆಳಿಗ್ಗೆ 11.30ಕ್ಕೆ ಆಸ್ಪತ್ರೆಗೆ ಸತೀಶ್ ಸೈಲ್ ಗೆ ಹಾಜರಾಗಲು ಹೈಕೋರ್ಟ್ ಸೂಚನೆ ನೀಡಿತು. ಬಳಿಕ ನವೆಂಬರ್ 20ರವರೆಗೆ ಮಧ್ಯಂತರ ಜಾಮೀನು ವಿಸ್ತರಿಸಿ ಆದೇಶ ಹೋರಡಿಸಿತು.








