ಉತ್ತರ ಕನ್ನಡ: ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡದೇ ಹೋದ್ರೆ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಎಚ್ಚರಿಕೆ ನೀಡಿದ್ದಾರೆ.
ಇಂದು ಈ ವಿಚಾರವಾಗಿ ಮಾತನಾಡಿದಂತ ಅವರು, ಬಜೆಟ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಿಸುವ ಭರವಸೆ ಇದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮುಂದೆಯೇ ನೀಡಿದ್ದಾರೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ವೇಳೆಯಲ್ಲೇ ಆಸ್ಪತ್ರೆ ಘೋಷಿಸದಿದ್ರೆ ಹೇಳಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂಬುದಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗ್ಬೇಕ್: ಸಚಿವ ಮಹದೇವಪ್ಪ ಒತ್ತಾಯ
ಸಿಎಂ ಸಿದ್ಧರಾಮಯ್ಯಗೆ ಈ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ








