ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿ, ಸಾವು ಗೆದ್ದಿದ್ದ ಸಾತ್ವಿಕ್ ಗುಣಮುಖನಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಸಾತ್ವಿಕ್ ಗೆ 48ಗಂಟೆಗಳವರೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ತಂಡ ಸಾತ್ವಿಕ್ ಹೆಸರಿನಲ್ಲಿ ಕೇಕ್ ತಂದು ಆಸ್ಪತ್ರೆಯಲ್ಲಿ ಮಗುವಿನ ತಂದೆ-ತಾಯಿ ಜೊತೆಗೆ ಕೇಕ್ ತಿನ್ನಿಸಿ ಸಂಭ್ರಮಿಸಿದರು.
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಏಪ್ರಿಲ್ 3 ರಂದು ಕೊಳವೆ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಸಾತ್ವಿಕ್ ಇದೀಗ ಸಂಪೂರ್ಣವಾಗಿ ಗುಣಮುಖನಾಗಿ ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.