ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿದ್ದ ಜಾರಿ ನಿರ್ದೇಶನಾಲಯದ ಮನವಿಯ ಆದೇಶವನ್ನು ರೋಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಕಾಯ್ದಿರಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ವಿಚಾರಣೆಗೆ ಸಂಬಂಧಿಸಿದ ಪ್ರಕರಣವನ್ನು ಇನ್ನೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಇಂದು ಸೆಪ್ಟೆಂಬರ್ 22 ರಂದು ಇಡಿ ಅರ್ಜಿಯನ್ನು ಕೈಗೆತ್ತಿಕೊಳ್ಳುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ ಒಂದು ದಿನದ ನಂತರ ವಿಚಾರಣೆ ನಡೆಸಲಾಗಿದೆ.
ಯಾವುದೇ ಆರೋಪಿಯು ತನ್ನ ಜಾಮೀನು ಅರ್ಜಿಯ ತ್ವರಿತ ವಿಚಾರಣೆಗೆ ಅರ್ಹನಾಗಿದ್ದಾನೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ರೂಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ಕೇಳಿದೆ.
#UPDATE | Principal District and Sessions Court of Rouse Avenue Court reserves order on ED petition seeking transfer of case of money laundering case related to Delhi Minister Satyender Jain. https://t.co/IE0HYhLyhK
— ANI (@ANI) September 22, 2022
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿನಯ್ ಕುಮಾರ್ ಗುಪ್ತಾ ಸೆಪ್ಟೆಂಬರ್ 19 ರಂದು ಜೈನ್ ಮತ್ತು ಪ್ರಕರಣದ ಇತರ ಸಹ-ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೊಂದು ನ್ಯಾಯಾಧೀಶರಿಗೆ ವರ್ಗಾಯಿಸಲು ಇಡಿ ಅರ್ಜಿಯ ಮೇಲೆ ನೋಟಿಸ್ ನೀಡಿದ್ದರು.
ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017 ರಲ್ಲಿ ಆಮ್ ಆದ್ಮಿ ಪಕ್ಷದ ನಾಯಕನ ವಿರುದ್ಧ ಕೇಂದ್ರೀಯ ತನಿಖಾ ದಳವು ದಾಖಲಿಸಿದ ಎಫ್ಐಆರ್ ಆಧರಿಸಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ.
ಸತ್ಯೇಂದ್ರ ಜೈನ್ ಅವರು ತನಗೆ ಸಂಬಂಧಿಸಿದ ನಾಲ್ಕು ಕಂಪನಿಗಳ ಮೂಲಕ ಹಣ ವಂಚಿಸಿದ್ದಾರೆ ಎಂಬ ಆರೋಪವಿದೆ.