ಶಿವಮೊಗ್ಗ: ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಾಕಲಾಗಿದ್ದಂತ ವಿ ಡಿ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ಬೆನ್ನಲ್ಲೇ, ಗಲಾಟೆ ಭುಗಿಲೆದ್ದಿದೆ. ಕೇವಲ ಎರಡು ಗಂಟೆಯ ಅಂತರದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

BREAKING NEWS: ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ ಹಿನ್ನಲೆ: ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಶಿವಮೊಗ್ಗದಲ್ಲಿ ಸಾವರ್ಕರ್ ಗಲಾಟೆ ಭುಗಿಲೆದ್ದಿದೆ. ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

BIG BREAKING NEWS: ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ‘ಸಾವರ್ಕರ್ ವಿವಾದ’: ಇಂದಿನಿಂದ ‘3 ದಿನ ನಿಷೇಧಾಜ್ಞೆ’ ಜಾರಿ

ಇನ್ನೂ ಫ್ಲೆಕ್ಸ್ ಗಲಾಟೆ ಶಿವಮೊಗ್ಗದಲ್ಲಿ ವ್ಯಾಪಕ ಸ್ವರೂಪ ಪಡೆಯುತ್ತಿದ್ದ ಬೆನ್ನಲ್ಲೇ, ನಗರದ ಉಪ್ಪಾರಕೇರಿಯಲ್ಲಿ ಪ್ರೇಮ್ ಸಿಂಗ್ ಎಂಬುವರಿಗೆ ಕಿಡಿಗೇಡಿಗಳು ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಮತ್ತೊಂದೆಡೆ ಅಶೋಕ ನಗರದಲ್ಲಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದಂತ ಪ್ರವೀಣ್ (27) ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಅಂಗಡಿ ಬಾಗಿಲು ಮುಚ್ಚಿ ಮನೆಗೆ ತೆರಳುತ್ತಿದ್ದಂತ ವೇಳೆಯಲ್ಲಿ ಪ್ರವೀಣ್ ಗೆ ಕಿಡಿಗೇಡಿಗಳು ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಕೂಡ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

BREAKING NEWS : ಉದ್ಯಮಿ ‘ಮುಖೇಶ್ ಅಂಬಾನಿ’ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್‌ |Threat Calls To Mukesh Ambani

Share.
Exit mobile version