ಬೆಂಗಳೂರು: ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಎಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ತಿಳಿಸಿದರು.
ಲೋಕಭವನದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿತು. ದ್ವೇಷ ಭಾಷಣ ಮಸೂದೆ ವಿರೋಧಿಸಿ ಮನವಿ ನೀಡಲಾಗಿದೆ ಎಂದರು. ಇದಕ್ಕೆ ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆಕ್ಷೇಪಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ನಿವೃತ್ತ ಐ.ಪಿ.ಎಸ್. ಅಧಿಕಾರಿ ಭಾಸ್ಕರ್ ರಾವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.
ಶಿವಮೊಗ್ಗ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
BREAKING: ಸಾಗರದಲ್ಲಿ ‘ಪ್ರತಿಷ್ಠಿತ ಪತ್ರಿಕೆ’ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ‘KUWJ ದೂರು’








