ಬೆಂಗಳೂರು: ನವೋದ್ಯಮಗಳಿಗೆ ಅಗತ್ಯವಾಗಿರುವ ಸಾಲಸೌಲಭ್ಯವನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ಪ್ರತ್ಯೇಕವಾದಂತಹ ಬ್ಯಾಂಕ್ ಶಾಖೆಯನ್ನು ಎಸ್ ಬಿ ಐ ಆರಂಭಿಸುತ್ತಿದ್ದು ಈ ಸಂಬಂಧ ಬ್ಯಾಂಕ್ ನ ಅಧಿಕಾರಿಗಳು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆ-ಡಿಇಎಂ) ಜತೆ ಶುಕ್ರವಾರ ಒಡಂಬಡಿಕೆಗೆ ಸಹಿ ಹಾಕಿದರು.

ನಗರದಲ್ಲಿ ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಡಿಇಎಂ ಪರವಾಗಿ ಅದರ ಸಿಇಒ ಸಂಜೀವ್ ಗುಪ್ತ ಮತ್ತು ಎಸ್‌ಬಿಐ ಪ್ರಧಾನ ವ್ಯವಸ್ಥಾಪಕ ಎಸ್.ರಾಧಾಕೃಷ್ಣನ್ ಅಂಕಿತ ಹಾಕಿ, ಒಪ್ಪಂದ ಪತ್ರವನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಈ ಐತಿಹಾಸಿಕ ಘಟನೆಗೆ ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಾಕ್ಷಿಯಾದರು.

ಬೆಂಗಳೂರಿನ ಕೋರಮಂಗಲದಲ್ಲಿ ಎಸ್ ಬಿ ಐ, ನವೋದ್ಯಮಿಗಳ ಸಲುವಾಗಿ ಪ್ರತ್ಯೇಕ ಶಾಖೆ ತೆರೆಯುತ್ತಿದ್ದು, ಇದನ್ನು ಆಗಸ್ಟ್ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದರು.

BREAKING NEWS: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ: ಧಗಧಗಿಸಿ ಹೊತ್ತಿ ಉರಿಯುತ್ತಿರುವ ನಿವಾಸ | Sri Lanka crisis

‘ಕೇಂದ್ರ ಸರಕಾರವು ಸೂಕ್ಷ್ಮ ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲ ಸೌಲಭ್ಯವನ್ನು ಖಾತ್ರಿಪಡಿಸಲು ರೂಪಿಸಿರುವ ಸಿಜಿಟಿಎಸ್‌ಎಂಇ ಯೋಜನೆಯಡಿ ಒಂದು ಸಂಸ್ಥೆಗೆ ತಲಾ 2 ಕೋಟಿ ರೂ.ವರೆಗೂ ಸಾಲ ಸಿಗುತ್ತಿದೆ. ಇದನ್ನು ಬಳಸಿಕೊಂಡು, ರಾಜ್ಯದಲ್ಲಿ ನವೋದ್ಯಮಗಳಿಗೆ ಈ ನೆರವು ಒದಗಿಸಲು ತೀರ್‍ಮಾನಿಸಲಾಗಿದೆ’ ಎಂದರು.

ರಾಜ್ಯದಲ್ಲಿ ಒಟ್ಟು 13 ಸಾವಿರ ನವೋದ್ಯಮಗಳಿವೆ. ಇವುಗಳಲ್ಲಿ ಕೆಲವು ಸಂಸ್ಥೆಗಳಿಗೆ ಹಣಕಾಸು ನಿಧಿಯ ಕೊರತೆ ಉಂಟಾಗುತ್ತದೆ. ಇದನ್ನು ಪರಿಹರಿಸಿ, ಸುಗಮ ಸಾಲ ಸಿಗುವಂತೆ ಮಾಡಲು ಈ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಎಸ್‌ಬಿಐ ಮುಂದಿನ ಆರು ತಿಂಗಳಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ಕ್ಲಸ್ಟರ್ ಗಳಲ್ಲಿ ಕೆಡಿಇಎಂ ಜತೆಗೂಡಿ ಇಂಥದೇ ಶಾಖೆಗಳನ್ನು ತೆರೆಯಲಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರದ `ಎಲಿವೇಟ್’ ಉಪಕ್ರಮದಡಿ ವಿಜೇತವಾಗಿರುವ 750 ಸ್ಟಾರ್ಟ್ ಅಪ್ ಕಂಪನಿಗಳು ಈಗಾಗಲೇ ನಮ್ಮಲ್ಲಿವೆ. ಈ ಒಪ್ಪಂದದಿಂದಾಗಿ ಇವುಗಳ ಜತೆಗೆ ಇನ್ನೂ 250ಕ್ಕೂ ಹೆಚ್ಚು (ಒಟ್ಟು 1,000ಕ್ಕೂ ಅಧಿಕ) ನವೋದ್ಯಮಗಳಿಗೆ ಯಾವುದೇ ಅಡೆತಡೆ ಇಲ್ಲದೆ ಸಾಲ ಸಿಗಲಿದೆ. ಇದರಿಂದ ಉದ್ಯಮಶೀಲತೆಯ ಬೆಳವಣಿಗೆ ನಿರಾತಂಕವಾಗಿ ಸಾಗಲಿದೆ. ಈ ಮೂಲಕ ಎಸ್‌ಬಿಐ, ಮಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಫಿನ್‌ಟೆಕ್‌ ಇನ್ನೋವೇಷನ್‌ ಹಬ್‌ನಲ್ಲಿ ಸಹಭಾಗಿತ್ವ ಹೊಂದಲಿದೆ ಎಂದು ಅವರು ನುಡಿದರು.

BIG NEWS: ‘ವಿಧಾನಸಭಾ ಚುನಾವಣೆ’ಗೆ ಮುನ್ನವೇ, ಈ ಹಾಲಿ ‘ಕೈ ಶಾಸಕ’ರಿಗೆ ಶುರುವಾಗಿದೆ ಸೋಲಿನ ಭೀತಿ | Karnataka Assembly Election 2022

ರಾಜ್ಯದಲ್ಲಿರುವ ಸ್ಟಾರ್ಟ್ ಅಪ್ ಕಾರ್‍ಯ ಪರಿಸರವು ಸಮರ್ಥವಾಗಿ ಮುಂದುವರಿಯಲು ಸಾರ್ವಜನಿಕ ವಲಯದ ಎಸ್‌ಬಿಐ ಸರಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹವಾಗಿದೆ. ಇದರಿಂದಾಗಿ ಕರ್ನಾಟಕವು ದೇಶದ ಫಿನ್‌-ಟೆಕ್ ತೊಟ್ಟಿಲಾಗಿ ಬೆಳೆಯಲಿದೆ. ಜತೆಗೆ, ವಿಶ್ವದ ಅಗ್ರಪಂಕ್ತಿಯ ಐದು ನವೋದ್ಯಮ ಕಾರ್ಯ ಪರಿಸರದ ನಗರಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‌ಬಿಐ ಉಪಪ್ರಧಾನ ವ್ಯವಸ್ಥಾಪಕ ರಾಣಾ ಆಶುತೋಷ್ ಕುಮಾರ್ ಸಿಂಗ್, `ಕರ್ನಾಟಕ ಸರಕಾರದ ರಚನಾತ್ಮಕ ಉಪಕ್ರಮಗಳಿಂದಾಗಿ ಎಸ್‌ಬಿಐ ದೇಶದ ಪ್ರಪ್ರಥಮ ಕ್ಲಸ್ಟರ್ ಸೀಡ್‌ ಫಂಡ್ ವ್ಯವಸ್ಥೆಯನ್ನು ಆರಂಭಿಸುವುದು ಸಾಧ್ಯವಾಗಿದೆ. ಉಳಿದ ರಾಜ್ಯಗಳೂ ಹೀಗೆಯೇ ಮುಂದಡಿ ಇಟ್ಟರೆ, ಈ ಸೌಲಭ್ಯವನ್ನು ಉಳಿದೆಡೆಗಳಲ್ಲೂ ಆರಂಭಿಸಬಹುದು’ ಎಂದರು.

ಸಮಾರಂಭದಲ್ಲಿ ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತ, ಎಸ್‌ಬಿಐ ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕ ನಂದಕಿಶೋರ್ ಉಪಸ್ಥಿತರಿದ್ದರು.

Share.
Exit mobile version