ಬಳ್ಳಾರಿ : ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ತರಬೇತಿ ಜೊತೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿAಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ನೀಡಲಾಗುತ್ತಿದ್ದು, ಒಟ್ಟು 200 ಇಂಜಿನೀಯರಿAಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ರೂ.15000/- ಗಳ ಶಿಷ್ಯವೇತನ ಮತ್ತು ತರಬೇತಿ ನೀಡಲಾಗುತ್ತದೆ.
ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏ.11 ಕೊನೆಯ ದಿನ ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.08395-200073 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ