ನವದೆಹಲಿ : 2002ರಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರನ್ನು ಹತ್ಯೆಗೈದ ಆರೋಪದ ಮೇಲೆ ಶಿಕ್ಷೆಗೊಳಗಾದ 11 ಆರೋಪಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿದೆ.
2008 ರಲ್ಲಿ ಶಿಕ್ಷೆಗೊಳಗಾದ 11 ಆರೋಪಿಗಳನ್ನು ಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರವು ತನ್ನ ಉಪಶಮನ ನೀತಿಯ ಅಡಿಯಲ್ಲಿ ಅವರನ್ನು ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು.
ಗುಜರಾತ್ನಲ್ಲಿ ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗಲಭೆಯಿಂದ ತಪ್ಪಿಸಿಕೊಳ್ಳುವಾಗ ಬಿಲ್ಕಿಸ್ ಬಾನೋ ಐದು ತಿಂಗಳ ಗರ್ಭಿಣಿಯಾಗಿದ್ದಳು. ಕೊಲೆಯಾದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಾಳೆ.
BIGG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ; ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಆನಂದ್ ಸಿಂಗ್
Viral news : ಚಲಿಸುತ್ತಿದ್ದ ಬೆಂಜ್ ಕಾರಿನ ಮೇಲೆ ಆಟೋ ಚಾಲಕ ದುಸ್ಸಾಹಸ ಮೆರೆದ ವಿಡಿಯೋ | Watch
BREAKING NEWS : ಕುಕ್ಕರ್ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಶಾರಿಕ್ ಬೆಂಗಳೂರಿಗೆ ಶಿಫ್ಟ್