ಬೆಂಗಳೂರು: ಜಯನಗರ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವೆ ಸೌಮ್ಯ ರೆಡ್ಡಿ ಅವರ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಹೀಗಾಗಿ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ ಎದುರಾದಂತೆ ಆಗಿದೆ.
ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತ ಕೋರಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು ಡಿವಿಡಿ ಸೇರಿದಂತೆ 10 ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿತ್ತು. ಫೆಬ್ರವರಿ.14ರವರೆಗೆ ಡಿವಿಡಿ ಸೇರಿದಂತೆ ಇತರೆ ದಾಖಲೆ ಸಲ್ಲಿಸಲು ಸೌಮ್ಯಾರೆಡ್ಡಿ ಅವರಿಗೆ ಹೈಕೋರ್ಟ್ ಅವಕಾಶ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್ ನ್ಯಾಯಪೀಠವು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸೋದಿಲ್ಲ ಎಂಬುದಾಗಿ ತಿಳಿಸಿ, ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನೂ ಸೌಮ್ಯಾರೆಡ್ಡಿ ಸಲ್ಲಿಸಿರುವಂತ ದಾಖಲೆಗೆಳಿಗೆ ಲಿಖಿತ ಹೇಳಿಕೆ ಸಲ್ಲಿಸಬಹುದು ಎಂಬುದಾಗಿ ಅಭಿಪ್ರಾಯ ಪಟ್ಟು, ಮೂರು ವಾರಗಳಲ್ಲಿ ಲಿಖಿತ ಹೇಳಿಕೆ ಸಲ್ಲಿಸಲು ಅವಕಾಶವನ್ನು ಶಾಸಕ ಸಿ.ಕೆ ರಾಮಮೂರ್ತಿಗೆ ನೀಡಿದೆ.
ಬೆಂಗಳೂರಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ‘ವುಮೆನ್ ವಾಕಥಾನ್’ ಆಯೋಜನೆ